ಭಾನುವಾರ, ಜನವರಿ 11, 2015

2.ಕರ್ನಾಟಕದ ಚರಿತ್ರೆಯ ಕೆಲ ಅಂಶಗಳು:

೧೯ನೆಯ ಶತಮಾನದ ಅಂತ್ಯದಲ್ಲಿ ಸ್ವಾತಂತ್ರ್ಯ ಚಳವಳಿಯು ತೀವ್ರವಾಯಿತು.

ಕಾರ್ನಾಡ ಸದಾಶಿವರಾವ್, ಆಲೂರು ವೆಂಕಟರಾಯರು, ಎಸ್. ನಿಜಲಿಂಗಪ್ಪ, ಕೆಂಗಲ್ ಹನುಮಂತಯ್ಯ, ನಿಟ್ಟೂರು ಶ್ರೀನಿವಾಸರಾವ್ ಮುಂತಾದವರು ೨೦ನೆಯ ಶತಮಾನದ ಪೂರ್ವಾರ್ಧದವರೆಗೂ ಸ್ವಾತಂತ್ರ್ಯ ಹೋರಾಟವನ್ನು ಮುಂದುವರೆಸಿಕೊಂಡು ಬಂದರು.

ಭಾರತದ ಸ್ವಾತಂತ್ರ್ಯದ ನಂತರ ಮೈಸೂರು ಸಂಸ್ಥಾನ ಭಾರತದ ಒಕ್ಕೂಟವನ್ನು ಸೇರಿತು.

ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ "ರಾಜಪ್ರಮುಖ"ರಾದರು.

ಒಡೆಯರ ಮನೆತನಕ್ಕೆ ಭಾರತ ಸರ್ಕಾರದಿಂದ ಗೌರವಧನ ೧೯೭೫ರ ವರೆಗೆ ಸಂದಾಯವಾಗುತ್ತಿತ್ತು.
ಈ ಮನೆತನದ ಸದಸ್ಯರು ಈಗಲೂ ಮೈಸೂರು ಅರಮನೆಯ ಒಂದು ಭಾಗದಲ್ಲಿ ಇದ್ದಾರೆ.
ಏಕೀಕರಣ ಚಳವಳಿಯ ಬಹುಕಾಲದ ಬೇಡಿಕೆಯ ಮೇರೆಗೆ ನವೆಂಬರ್ ೧, ೧೯೫೬ ರಂದು ರಾಜ್ಯ ಪುನಸ್ಸಂಘಟನಾ ಕಾಯಿದೆಗೆ ಅನುಸಾರವಾಗಿ ಮೈಸೂರು ರಾಜ್ಯಕ್ಕೆ ಕೊಡಗು ರಾಜ್ಯ ಹಾಗೂ ಸುತ್ತಲ ಮದರಾಸು, ಹೈದರಾಬಾದ್, ಮತ್ತು ಮುಂಬೈ ರಾಜ್ಯಗಳ ಕನ್ನಡ-ಪ್ರಧಾನ ಪ್ರದೇಶಗಳು ಸೇರಿ ಏಕೀಕೃತ "ವಿಶಾಲ ಮೈಸೂರು" ಅಸ್ತಿತ್ವಕ್ಕೆ ಬಂದಿತು (ಬಳ್ಳಾರಿ ಜಿಲ್ಲೆ ೧೯೫೩ರಲ್ಲಾಗಲೆ ರಾಜ್ಯಕ್ಕೆ ಸೇರಿತ್ತು). ನವೆಂಬರ್ ೧, ೧೯೭೩ ರಲ್ಲಿ ರಾಜ್ಯದ ಹೆಸರನ್ನು ಕರ್ನಾಟಕ ಎಂದು ಬದಲಾಯಿಸಲಾಯಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ